Home Bibles ಮತ್ತಾಯ 6:21 · ಕನ್ನಡ ಬೈಬಲ್
ಮತ್ತಾಯ 6:21 · ಕನ್ನಡ ಬೈಬಲ್

ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.

Cross references

ಸಾಮೇತಿಗಳು 4:23

ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.

ಯೆಶಾಯ 33:6

ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.

ಯೆರೆಮಿಯ 4:14

ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?

ಯೆರೆಮಿಯ 22:17

ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

ಮತ್ತಾಯ 12:34

ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

ಲೂಕ 12:34

ಯಾಕಂದರೆ ನಿಮ್ಮ ಸಂಪತ್ತು ಇರುವಲ್ಲಿಯೇ ನಿಮ್ಮ ಹೃದಯವು ಸಹ ಇರುವದು.

ಅಪೋಸ್ತಲರ ಕೃತ್ಯಗಳು 8:21

ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.

ರೋಮಾಪುರದವರಿಗೆ 7:5

ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.

2 ಕೊರಿಂಥದವರಿಗೆ 4:18

ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.

ಕೊಲೊಸ್ಸೆಯವರಿಗೆ 3:1

ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

ಫಿಲೇಮೋನ 1:3

ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಫಿಲೇಮೋನ 1:19

ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?

ಹೆಬ್ರಿಯರಿಗೆ 3:12

ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

Interlinear

Choose Theme