Home Bibles ☰ Books ಮತ್ತಾಯ 8:18 · ಕನ್ನಡ ಬೈಬಲ್
ಮತ್ತಾಯ 8:18 · ಕನ್ನಡ ಬೈಬಲ್

ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.

Cross references

ಮತ್ತಾಯ 8:1

ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

ಮತ್ತಾಯ 14:22

ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.

ಮಾರ್ಕ 1:35

ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು.

ಮಾರ್ಕ 4:35

ಅದೇ ದಿವಸ ಸಾಯಂಕಾಲವಾದಾಗ ಆತನು ಅವರಿಗೆ--ನಾವು ಆಚೇದಡಕ್ಕೆ ಹೋಗೋಣ ಅಂದನು.

ಮಾರ್ಕ 5:21

ಯೇಸು ತಿರಿಗಿ ದೋಣಿಯಲ್ಲಿ ಆಚೇದಡಕ್ಕೆ ಹೋದಾಗ ಬಹಳ ಜನರು ಆತನ ಬಳಿಗೆ ಕೂಡಿಬಂದರು; ಆಗ ಆತನು ಸಮುದ್ರದ ಸವಿಾಪದ ಲ್ಲಿದ್ದನು.

ಮಾರ್ಕ 6:45

ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.

ಮಾರ್ಕ 8:13

ಆತನು ಅವರನ್ನು ಬಿಟ್ಟು ತಿರಿಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೊರಟು ಹೋದನು.

ಲೂಕ 4:42

ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು.

ಲೂಕ 8:22

ಇದಾದ ಮೇಲೆ ಒಂದಾನೊಂದು ದಿವಸ ಆತನು ತನ್ನ ಶಿಷ್ಯರೊಂದಿಗೆ ದೋಣಿಯನ್ನು ಹತ್ತಿ ಅವರಿಗೆ--ನಾವು ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಹೇಳಿದಾಗ ಅವರು ಹೊರಟರು.

ಯೋಹಾನ 6:15

ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.

Interlinear

Choose Theme