ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
Cross references
ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು.
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.