ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
Cross references
ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು
ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
ಆದರೆ ಅವರು ಪ್ರಯಾಣಮಾಡುತ್ತಿದ್ದಾಗ ಆತನು ನಿದ್ರಿ ಸಿದನು; ಆಗ ಬಿರುಗಾಳಿಯು ಕೆರೆಯ ಮೇಲೆ ಬೀಸಲು ದೋಣಿಯೊಳಗೆ ನೀರು ತುಂಬಿದ್ದರಿಂದ ಅವರು ಪ್ರಾಣಾಪಾಯಕ್ಕೊಳಗಾದರು.
ದೋಣಿಯನ್ನು ಹತ್ತಿ ಸಮುದ್ರಮಾರ್ಗವಾಗಿ ಕಪೆರ್ನೌಮಿಗೆ ಹೋಗುತ್ತಿ ದ್ದರು. ಆಗಲೇ ಕತ್ತಲಾಗಿತ್ತು , ಯೇಸು ಅವರ ಬಳಿಗೆ ಬಂದಿರಲಿಲ್ಲ.
ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು.
ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.
ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.