Home Bibles ಮತ್ತಾಯ 9:35 · ಕನ್ನಡ ಬೈಬಲ್
ಮತ್ತಾಯ 9:35 · ಕನ್ನಡ ಬೈಬಲ್

ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.

Cross references

ಮತ್ತಾಯ 4:23

ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.

ಮತ್ತಾಯ 11:1

ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.

ಮತ್ತಾಯ 11:5

ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

ಮಾರ್ಕ 1:32

ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.

ಮಾರ್ಕ 6:6

ಆತನು ಅವರ ಅಪನಂಬಿಕೆ ಯ ದೆಸೆಯಿಂದ ಆಶ್ಚರ್ಯಪಟ್ಟನು; ಮತ್ತು ಸುತ್ತಲಿನ ಹಳ್ಳಿಗಳಿಗೆ ಹೋಗಿ ಬೋಧಿಸುತ್ತಾ ಇದ್ದನು.

ಮಾರ್ಕ 6:56

ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ

ಲೂಕ 4:43

ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.ಆತನು ಗಲಿಲಾಯದ ಸಭಾಮಂದಿರಗಳಲ್ಲಿ ಸಾರಿದನು.

ಲೂಕ 13:22

ಆತನು ಪಟ್ಟಣಗಳನ್ನೂ ಹಳ್ಳಿಗಳನ್ನೂ ಹಾದು, ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣ ಮಾಡಿದನು.

ಅಪೋಸ್ತಲರ ಕೃತ್ಯಗಳು 2:22

ಇಸ್ರಾಯೇಲ್‌ ಜನರೇ, ಈ ಮಾತುಗಳನ್ನು ಕೇಳಿರಿ; ನಿಮಗೂ ತಿಳಿದಿರುವಂತೆ ನಜರೇತಿನ ಯೇಸುವು ದೇವರಿಗೆ ಮೆಚ್ಚಿಕೆಯಾದ ನೆಂಬದಕ್ಕೆ ದೇವರು ಆತನಿಂದ ಮಹತ್ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯ ಗಳನ್ನೂ ನಿಮ್ಮ ಮಧ್ಯದಲ್ಲಿ ನಡಿಸಿದನು.

ಅಪೋಸ್ತಲರ ಕೃತ್ಯಗಳು 10:38

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.

Interlinear

Choose Theme