Home Bibles ಮೀಕ 4:1 · ಕನ್ನಡ ಬೈಬಲ್
ಮೀಕ 4:1 · ಕನ್ನಡ ಬೈಬಲ್

ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.

Cross references

ಆದಿಕಾಂಡ 49:1

ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.

ಆದಿಕಾಂಡ 49:10

ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.

ಕೀರ್ತನೆಗಳು 22:27

ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.

ಕೀರ್ತನೆಗಳು 68:15

ಬಾಷಾನ್‌ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್‌ ಬೆಟ್ಟವು ಉನ್ನತ ಬೆಟ್ಟವಾಗಿದೆ.

ಕೀರ್ತನೆಗಳು 68:29

ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.

ಕೀರ್ತನೆಗಳು 72:7

ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.

ಕೀರ್ತನೆಗಳು 72:16

ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.

ಕೀರ್ತನೆಗಳು 86:9

ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.

ಕೀರ್ತನೆಗಳು 110:3

ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.

ಯೆಶಾಯ 2:1

ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:

ಯೆಶಾಯ 2:2

ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

ಯೆಶಾಯ 11:9

ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.

ಯೆಶಾಯ 27:13

ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

ಯೆಶಾಯ 43:6

ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು

ಯೆಶಾಯ 49:6

ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 49:19

ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.

ಯೆಶಾಯ 54:2

ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.

ಯೆಶಾಯ 60:3

ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.

ಯೆಶಾಯ 60:7

ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.

ಯೆಶಾಯ 66:18

ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.

ಯೆರೆಮಿಯ 3:17

ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.

ಯೆರೆಮಿಯ 16:19

ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು

ಯೆಹೆಜ್ಕೇಲ 17:22

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.

ಯೆಹೆಜ್ಕೇಲ 17:23

ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.

ಯೆಹೆಜ್ಕೇಲ 38:16

ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.

ಯೆಹೆಜ್ಕೇಲ 40:2

ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್‌ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.

ಯೆಹೆಜ್ಕೇಲ 43:12

ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.

ದಾನಿಯೇಲ 2:28

ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,

ದಾನಿಯೇಲ 2:35

ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.

ದಾನಿಯೇಲ 2:44

ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.

ದಾನಿಯೇಲ 7:14

ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.

ದಾನಿಯೇಲ 7:18

ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.

ದಾನಿಯೇಲ 7:22

ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.

ದಾನಿಯೇಲ 7:27

ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.

ದಾನಿಯೇಲ 10:14

ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.

ಹೊಶೇಯ 3:5

ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.

ಮೀಕ 3:12

ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

ಸೆಫನ್ಯ 3:9

ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.

ಜೆಕರ್ಯ 2:11

ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

Interlinear

Choose Theme