Home Bibles ಮೀಕ 5:10 · ಕನ್ನಡ ಬೈಬಲ್
ಮೀಕ 5:10 · ಕನ್ನಡ ಬೈಬಲ್

ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

Cross references

ಕೀರ್ತನೆಗಳು 20:7

ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.

ಕೀರ್ತನೆಗಳು 33:16

ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.

ಯೆಶಾಯ 2:7

ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.

ಯೆರೆಮಿಯ 3:23

ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.

ಹೊಶೇಯ 1:7

ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.

ಹೊಶೇಯ 14:3

ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.

ಜೆಕರ್ಯ 9:10

ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

Interlinear

Choose Theme