Home Bibles ಮೀಕ 6:5 · ಕನ್ನಡ ಬೈಬಲ್
ಮೀಕ 6:5 · ಕನ್ನಡ ಬೈಬಲ್

ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.

Cross references

ಅಂಕೆಗಳ ಪುಸ್ತಕ 22:1

ಇಸ್ರಾಯೇಲ್‌ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು.

ಅಂಕೆಗಳ ಪುಸ್ತಕ 22:41

ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.

ಅಂಕೆಗಳ ಪುಸ್ತಕ 23:13

ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;

ಅಂಕೆಗಳ ಪುಸ್ತಕ 23:27

ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.

ಅಂಕೆಗಳ ಪುಸ್ತಕ 25:1

ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.

ಅಂಕೆಗಳ ಪುಸ್ತಕ 25:2

ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.

ಅಂಕೆಗಳ ಪುಸ್ತಕ 31:8

ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್‌, ಚೂರ್‌, ಹೂರ್‌, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.

ಅಂಕೆಗಳ ಪುಸ್ತಕ 31:16

ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್‌ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.

ಅಂಕೆಗಳ ಪುಸ್ತಕ 33:49

ಅವರು ಯೊರ್ದನ್‌ ನದಿಯ ಬಳಿಯಲ್ಲಿರುವ ಬೇತ್‌ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್‌ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.

ದ್ವಿತೀಯೋಪದೇಶಕಾಂಡ 8:2

ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 8:18

ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.

ದ್ವಿತೀಯೋಪದೇಶಕಾಂಡ 9:7

ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.

ದ್ವಿತೀಯೋಪದೇಶಕಾಂಡ 16:3

ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.

ದ್ವಿತೀಯೋಪದೇಶಕಾಂಡ 23:4

ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.

ದ್ವಿತೀಯೋಪದೇಶಕಾಂಡ 23:6

ನೀನು ಇರುವ ವರೆಗೆ ಎಂದಿಗೂ ಅವರ ಸಮಾಧಾನವನ್ನೂ ಅವರ ಮೇಲನ್ನೂ ಹುಡುಕ ಬಾರದು.

ಯೆಹೋಶುವ 4:19

ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.

ಯೆಹೋಶುವ 5:9

ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.

ಯೆಹೋಶುವ 10:42

ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.

ಯೆಹೋಶುವ 24:9

ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.

ಯೆಹೋಶುವ 24:10

ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.

ನ್ಯಾಯಾಧಿಪತಿಗಳು 5:11

ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.

1 ಸಮುವೇಲ 12:7

ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.

ಕೀರ್ತನೆಗಳು 36:10

ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.

ಕೀರ್ತನೆಗಳು 71:15

ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.

ಕೀರ್ತನೆಗಳು 71:19

ಓ ದೇವರೇ, ಮಹತ್ಕಾರ್ಯಗಳನ್ನು ಮಾಡಿದ ನಿನ್ನ ನೀತಿಯು ಬಹಳ ಉನ್ನತವಾಗಿದೆ. ಓ ದೇವರೇ, ನಿನ್ನ ಹಾಗೆ ಯಾರಿದ್ದಾರೆ!

ಕೀರ್ತನೆಗಳು 103:1

ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.

ಕೀರ್ತನೆಗಳು 111:4

ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.

ಕೀರ್ತನೆಗಳು 143:11

ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.

ರೋಮಾಪುರದವರಿಗೆ 3:25

ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

ಎಫೆಸದವರಿಗೆ 2:11

ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.

2 ಪೇತ್ರ 2:15

ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.

1 ಯೋಹಾನ 1:9

ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.

ಯೂದ 1:11

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

ಪ್ರಕಟನೆ 2:14

ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು

Interlinear

Choose Theme