ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
Cross references
ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
ಧೂಳಿನಿಂದ ಕೇಡು ಹುಟ್ಟುವದಿಲ್ಲ. ಭೂಮಿ ಯಿಂದ ಕಷ್ಟ ಮೊಳೆಯುವದಿಲ್ಲ.
ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ.
ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.