Home Bibles ನಹೂಮ 2:1 · ಕನ್ನಡ ಬೈಬಲ್
ನಹೂಮ 2:1 · ಕನ್ನಡ ಬೈಬಲ್

ಚೂರುಚೂರಾಗಿ ಒಡೆದು ಬಿಡುವವನು ನಿನ್ನ ಎದುರಿಗೆ ಬಂದಿದ್ದಾನೆ; ಆಯುಧ ಗಳನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿ ಮಾಡಿಕೋ.

Cross references

2 ದಿನವೃತ್ತಾಂತ 25:8

ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.

ಕೀರ್ತನೆಗಳು 50:14

ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.

ಕೀರ್ತನೆಗಳು 65:2

ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.

ಯೆಶಾಯ 14:6

ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.

ಯೆಶಾಯ 29:7

ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು.

ಯೆಶಾಯ 29:8

ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್‌ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.

ಯೆಶಾಯ 52:7

ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!

ಯೆರೆಮಿಯ 25:9

ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.

ಯೆರೆಮಿಯ 46:3

ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.

ಯೆರೆಮಿಯ 50:23

ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.

ಯೆರೆಮಿಯ 51:11

ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.

ಯೆರೆಮಿಯ 51:20

ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.

ಯೋವೇಲ 3:9

ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.

ನಹೂಮ 3:14

ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು.

Interlinear

Choose Theme