Home Bibles ನಹೂಮ 3:13 · ಕನ್ನಡ ಬೈಬಲ್
ನಹೂಮ 3:13 · ಕನ್ನಡ ಬೈಬಲ್

ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು.

Cross references

ಕೀರ್ತನೆಗಳು 107:16

ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.

ಕೀರ್ತನೆಗಳು 147:13

ನಿನ್ನ ಬಾಗಲುಗಳ ಅಗುಳಿ ಗಳನ್ನು ಬಲಮಾಡಿ ಆತನು ನಿನ್ನ ಮಕ್ಕಳನ್ನು ನಿನ್ನ ಮಧ್ಯದಲ್ಲಿ ಆಶೀರ್ವದಿಸುತ್ತಾನೆ.

ಯೆಶಾಯ 19:16

ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.

ಯೆಶಾಯ 45:1

ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--

ಯೆಶಾಯ 45:2

ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

ಯೆರೆಮಿಯ 50:37

ಬಾಬೆಲ್‌ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.

ಯೆರೆಮಿಯ 51:30

ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.

ಒಬದ್ಯ 1:9

ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶ ವಾಗುವ ಹಾಗೆ ಓ ತೇಮಾನೇ, ನಿನ್ನ ಪರಾಕ್ರಮ ಶಾಲಿಗಳು ಗಾಬರಿಪಡುವರು.

ನಹೂಮ 2:6

ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.

ನಹೂಮ 2:7

ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.

Interlinear

Choose Theme