Home Bibles ನೆಹೆಮ್ಯ 1:10 · ಕನ್ನಡ ಬೈಬಲ್
ನೆಹೆಮ್ಯ 1:10 · ಕನ್ನಡ ಬೈಬಲ್

ನಿನ್ನ ಮಹಾ ಶಕ್ತಿಯಿಂದಲೂ ಬಲವಾದ ಕೈಯಿಂದಲೂ ನೀನು ವಿಮೋಚಿಸಿದ ನಿನ್ನ ಸೇವಕರೂ ಜನರೂ ಇವರೇ.ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.

Cross references

ನಿರ್ಗಮಕಾಂಡ 6:1

ಕರ್ತನು ಮೋಶೆಗೆ--ನಾನು ಫರೋಹ ನಿಗೆ ಮಾಡುವದನ್ನು ಈಗ ನೀನು ನೋಡುವಿ. ಅವನು ಬಲವಾದ ಹಸ್ತದಿಂದ ಅವರನ್ನು ಹೋಗಗೊಡಿಸಿ ಬಲವಾದ ಹಸ್ತದಿಂದ ಅವನು ಅವ ರನ್ನು ತನ್ನ ದೇಶದೊಳಗಿಂದ ಓಡಿಸುವನು ಅಂದನು.

ನಿರ್ಗಮಕಾಂಡ 6:7

ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.

ನಿರ್ಗಮಕಾಂಡ 13:3

ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.

ನಿರ್ಗಮಕಾಂಡ 13:9

ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.

ನಿರ್ಗಮಕಾಂಡ 13:14

ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.

ನಿರ್ಗಮಕಾಂಡ 13:16

ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.

ನಿರ್ಗಮಕಾಂಡ 15:13

ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.

ನಿರ್ಗಮಕಾಂಡ 32:11

ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?

ದ್ವಿತೀಯೋಪದೇಶಕಾಂಡ 9:29

ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.

ದ್ವಿತೀಯೋಪದೇಶಕಾಂಡ 15:15

ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.

ಕೀರ್ತನೆಗಳು 74:2

ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್‌ ಪರ್ವತವನ್ನೂ ಜ್ಞಾಪಕಮಾಡಿಕೋ.

ಕೀರ್ತನೆಗಳು 89:14

ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;

ಕೀರ್ತನೆಗಳು 136:12

ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.

ಯೆಶಾಯ 63:16

ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.

ಯೆಶಾಯ 64:9

ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.

ದಾನಿಯೇಲ 9:15

ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.

Interlinear

Choose Theme