Home Bibles ನೆಹೆಮ್ಯ 10:33 · ಕನ್ನಡ ಬೈಬಲ್
ನೆಹೆಮ್ಯ 10:33 · ಕನ್ನಡ ಬೈಬಲ್

ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.

Cross references

ನಿರ್ಗಮಕಾಂಡ 30:16

ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್‌ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್‌ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.

ಲೇವ್ಯಕಾಂಡ 24:5

ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು.

ಅಂಕೆಗಳ ಪುಸ್ತಕ 28:1

ಕರ್ತನು ಮೋಶೆಯ ಸಂಗಡ ಮಾತ ನಾಡಿ--

2 ದಿನವೃತ್ತಾಂತ 2:4

ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.

2 ದಿನವೃತ್ತಾಂತ 24:5

ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.

ಹೆಬ್ರಿಯರಿಗೆ 10:11

ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.

Interlinear

Choose Theme