Home Bibles ನೆಹೆಮ್ಯ 10:36 · ಕನ್ನಡ ಬೈಬಲ್
ನೆಹೆಮ್ಯ 10:36 · ಕನ್ನಡ ಬೈಬಲ್

ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು;

Cross references

ನಿರ್ಗಮಕಾಂಡ 13:2

ಇಸ್ರಾಯೇಲ್‌ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.

ನಿರ್ಗಮಕಾಂಡ 13:12

ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.

ನಿರ್ಗಮಕಾಂಡ 23:19

ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ನಿರ್ಗಮಕಾಂಡ 34:19

ಪ್ರಥಮ ಗರ್ಭ ತೆರೆಯುವದೆಲ್ಲಾ ನನ್ನದೇ. ನಿಮ್ಮ ಪಶುಗಳಾಗಲಿ ಎತ್ತುಗಳಾಗಲಿ ಟಗರುಗಳಾಗಲಿ ಮೊದಲು ಹುಟ್ಟುವ ಗಂಡಾದವುಗಳೆಲ್ಲಾ ನನ್ನವೇ.

ಲೇವ್ಯಕಾಂಡ 27:26

ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ.

ಅಂಕೆಗಳ ಪುಸ್ತಕ 18:9

ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.

ದ್ವಿತೀಯೋಪದೇಶಕಾಂಡ 12:6

ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.

2 ದಿನವೃತ್ತಾಂತ 31:5

ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್‌ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು;

ನೆಹೆಮ್ಯ 12:44

ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.

ನೆಹೆಮ್ಯ 13:5

ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.

ಮಲಾಕಿ 3:10

ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

1 ಕೊರಿಂಥದವರಿಗೆ 9:6

ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?

ಗಲಾತ್ಯದವರಿಗೆ 6:6

ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.

Interlinear

Choose Theme