Home Bibles ನೆಹೆಮ್ಯ 12:39 · ಕನ್ನಡ ಬೈಬಲ್
ನೆಹೆಮ್ಯ 12:39 · ಕನ್ನಡ ಬೈಬಲ್

ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.

Cross references

2 ಅರಸುಗಳು 14:13

ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು

ನೆಹೆಮ್ಯ 3:1

ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.

ನೆಹೆಮ್ಯ 3:3

ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.

ನೆಹೆಮ್ಯ 3:6

ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.

ನೆಹೆಮ್ಯ 3:25

ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.

ನೆಹೆಮ್ಯ 3:31

ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.

ನೆಹೆಮ್ಯ 8:16

ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.

ಯೆರೆಮಿಯ 31:38

ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.

ಯೆರೆಮಿಯ 32:2

ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-

ಸೆಫನ್ಯ 1:10

ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.

ಯೋಹಾನ 5:2

ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.

Interlinear

Choose Theme