ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
Cross references
ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.
ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.
ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ.
ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.
ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.