ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.
Cross references
ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ಅಧಿಪತಿಯಾಗಿದ್ದ ಕಾಲ ಮೊದಲುಗೊಂಡು ಅರಸ ನಾದ ಆರ್ತಷಸ್ತನ ಇಪ್ಪತ್ತನೇ ವರುಷ ಮೊದಲು ಗೊಂಡು ಮೂವತ್ತೆರಡನೇ ವರುಷದ ವರೆಗೆ ಹನ್ನೆರಡು ವರುಷವಾಗಿ ನಾನೂ ನನ್ನ ಸಹೋದರರೂ ಅಧಿ ಪತಿಯಾದವನ ರೊಟ್ಟಿಯನ್ನು ತಿನ್ನಲಿಲ್ಲ.
ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು
ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.