ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
Cross references
ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.
ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.