ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
Cross references
ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.