ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
Cross references
ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ.
ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.