ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
Cross references
ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
ಅಬೀಮೆಲೆಕನು ತನ್ನ ಸಂಗಡ ಇದ್ದ ಜನರೆಲ್ಲರ ಸಹಿತವಾಗಿ ಚಲ್ಮೊನ್ ಬೆಟ್ಟವನ್ನೇರಿ ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು ಒಂದು ಮರದ ಕೊಂಬೆಯನ್ನು ಕಡಿದು ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು ತನ್ನ ಕೂಡ ಇದ್ದ ಜನರಿಗೆ--ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ ಅಂದನು.
ಇದಲ್ಲದೆ ನಾನು ಈ ಗೋಡೆಯ ಕಾರ್ಯದಲ್ಲಿ ನೆಲೆಯಾಗಿದ್ದೆನು. ನಾವು ಭೂಮಿಯನ್ನು ಕೊಂಡುಕೊಳ್ಳಲಿಲ್ಲ. ನನ್ನ ಸೇವಕರೆಲ್ಲರು ಕೆಲಸಕ್ಕೆ ಕೂಡಿ ಬಂದರು.
ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.