Home Bibles ನೆಹೆಮ್ಯ 4:3 · ಕನ್ನಡ ಬೈಬಲ್
ನೆಹೆಮ್ಯ 4:3 · ಕನ್ನಡ ಬೈಬಲ್

ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.

Cross references

1 ಅರಸುಗಳು 20:10

ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.

1 ಅರಸುಗಳು 20:18

ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.

2 ಅರಸುಗಳು 18:23

ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.

ನೆಹೆಮ್ಯ 2:10

ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್‌ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.

ನೆಹೆಮ್ಯ 2:19

ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.

ನೆಹೆಮ್ಯ 6:1

ನಾನು ಕದಗಳನ್ನು ಬಾಗಲುದ್ವಾರಗಳಲ್ಲಿ ನಿಲ್ಲಿಸುವದಕ್ಕಿಂತ ಮುಂಚೆ ಗೋಡೆಯನ್ನು ಕಟ್ಟಿಸಿದೆನೆಂದೂ ಅದರಲ್ಲಿ ಒಂದು ಸಂದೂ ಬಿಡಲ್ಪಡ ಲಿಲ್ಲವೆಂದೂ ಸನ್ಬಲ್ಲಟನೂ ಟೋಬೀಯನೂ ಅರಬ್ಯ ನಾದ ಗೆಷೆಮನೂ ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ

ವಿಲಾಪಗಳು 5:18

ಚೀಯೋನ್‌ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.

Interlinear

Choose Theme