ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.
Cross references
ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.