ಅಂಕೆಗಳ ಪುಸ್ತಕ 1:30 · ಕನ್ನಡ ಬೈಬಲ್
ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು
Cross references
ಆದಿಕಾಂಡ 30:20
ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
ಆದಿಕಾಂಡ 46:14
ಜೆಬು ಲೂನನ ಮಕ್ಕಳು: ಸೆರೆದ್ ಏಲೋನ್ ಯಹ್ಲೇಲ್ ಎಂಬವರು.
ಆದಿಕಾಂಡ 49:13
ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
ಅಂಕೆಗಳ ಪುಸ್ತಕ 2:7
ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ.
ಅಂಕೆಗಳ ಪುಸ್ತಕ 26:26
ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.