Home Bibles ಅಂಕೆಗಳ ಪುಸ್ತಕ 11:21 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 11:21 · ಕನ್ನಡ ಬೈಬಲ್

ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ.

Cross references

ಆದಿಕಾಂಡ 12:2

ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.

ನಿರ್ಗಮಕಾಂಡ 12:37

ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.

ನಿರ್ಗಮಕಾಂಡ 38:26

ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.

ಅಂಕೆಗಳ ಪುಸ್ತಕ 1:46

ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.

ಅಂಕೆಗಳ ಪುಸ್ತಕ 2:32

ಇಸ್ರಾಯೇಲ್‌ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.

Interlinear

Choose Theme