ಅಂಕೆಗಳ ಪುಸ್ತಕ 11:24 · ಕನ್ನಡ ಬೈಬಲ್
ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು.
Cross references
ಅಂಕೆಗಳ ಪುಸ್ತಕ 11:16
ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
ಅಂಕೆಗಳ ಪುಸ್ತಕ 11:26
ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.