ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
Cross references
ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,
ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.