Home Bibles ☰ Books ಅಂಕೆಗಳ ಪುಸ್ತಕ 11:33 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 11:33 · ಕನ್ನಡ ಬೈಬಲ್

ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.

Cross references

ಅಂಕೆಗಳ ಪುಸ್ತಕ 16:49

ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.

ಅಂಕೆಗಳ ಪುಸ್ತಕ 17:11

ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.

ಅಂಕೆಗಳ ಪುಸ್ತಕ 25:9

ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.

ದ್ವಿತೀಯೋಪದೇಶಕಾಂಡ 28:27

ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.

ಕೀರ್ತನೆಗಳು 78:26

ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು.

ಕೀರ್ತನೆಗಳು 78:30

ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ

ಕೀರ್ತನೆಗಳು 78:31

ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು.

ಕೀರ್ತನೆಗಳು 106:14

ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.

Interlinear

Choose Theme