Home Bibles ☰ Books ಅಂಕೆಗಳ ಪುಸ್ತಕ 12:7 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 12:7 · ಕನ್ನಡ ಬೈಬಲ್

ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.

Cross references

ನಿರ್ಗಮಕಾಂಡ 33:11

ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಕರ್ತನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡು ತ್ತಿದ್ದನು. ತರುವಾಯ ಅವನು ಪಾಳೆಯಕ್ಕೆ ಹಿಂತಿರಿಗಿ ಹೋದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವ ಎಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.

ದ್ವಿತೀಯೋಪದೇಶಕಾಂಡ 18:18

ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.

ಯೆಹೋಶುವ 1:1

ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ--

ಕೀರ್ತನೆಗಳು 105:26

ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.

ಮತ್ತಾಯ 11:9

ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.

ಮತ್ತಾಯ 11:11

ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.

ಅಪೋಸ್ತಲರ ಕೃತ್ಯಗಳು 3:22

ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;

ಅಪೋಸ್ತಲರ ಕೃತ್ಯಗಳು 7:31

ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.

1 ಕೊರಿಂಥದವರಿಗೆ 4:2

ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.

1 ತಿಮೋಥೆಯ 3:15

ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

ಹೆಬ್ರಿಯರಿಗೆ 3:2

ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.

1 ಪೇತ್ರ 2:4

ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.

Interlinear

Choose Theme