ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು.
Cross references
ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಅರಣ್ಯ ದಿಂದ ಪ್ರಯಾಣ ಮಾಡಿದರು; ಮೇಘವು ಪಾರಾನೆಂಬ ಅರಣ್ಯದಲ್ಲಿ ನಿಂತಿತು.
ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.
ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ನಾನು ದೇಶವನ್ನು ನೋಡುವದಕ್ಕೆ ಕಾದೇಶ್‌ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ
ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.