ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
Cross references
ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
ಆಶೇರ್ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್,
ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.