Home Bibles ☰ Books ಅಂಕೆಗಳ ಪುಸ್ತಕ 14:18 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 14:18 · ಕನ್ನಡ ಬೈಬಲ್

ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?

Cross references

ನಿರ್ಗಮಕಾಂಡ 20:5

ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.

ನಿರ್ಗಮಕಾಂಡ 34:6

ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ

ದ್ವಿತೀಯೋಪದೇಶಕಾಂಡ 5:9

ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.

ಯೋಬ 21:19

ದೇವರು ಅವನ ಮಕ್ಕಳಿಗೆ ಅವನ ಅಪರಾಧವನ್ನು ಇಡುತ್ತಾನೆ; ಅವನು ತಿಳುಕೊಳ್ಳುವ ಹಾಗೆ ಅವನಿಗೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.

ಕೀರ್ತನೆಗಳು 86:15

ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.

ಕೀರ್ತನೆಗಳು 103:8

ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.

ಕೀರ್ತನೆಗಳು 145:8

ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.

ಯೆರೆಮಿಯ 23:2

ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.

ಯೆರೆಮಿಯ 32:18

ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.

ವಿಲಾಪಗಳು 5:7

ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.

ಯೋನ 4:2

ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.

ಮೀಕ 7:18

ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.

Interlinear

Choose Theme