ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
Cross references
ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.