Home Bibles ☰ Books ಅಂಕೆಗಳ ಪುಸ್ತಕ 14:42 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 14:42 · ಕನ್ನಡ ಬೈಬಲ್

ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.

Cross references

ದ್ವಿತೀಯೋಪದೇಶಕಾಂಡ 1:42

ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು.

ಯೆಹೋಶುವ 7:8

ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.

ಯೆಹೋಶುವ 7:12

ಆದದ ರಿಂದ ಇಸ್ರಾಯೇಲ್‌ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.

ನ್ಯಾಯಾಧಿಪತಿಗಳು 16:20

ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.

2 ದಿನವೃತ್ತಾಂತ 15:2

ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;

ಕೀರ್ತನೆಗಳು 44:1

ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ.

ಕೀರ್ತನೆಗಳು 44:10

ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.

ಕೀರ್ತನೆಗಳು 89:43

ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.

Interlinear

Choose Theme