Home Bibles ☰ Books ಅಂಕೆಗಳ ಪುಸ್ತಕ 15:32 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:32 · ಕನ್ನಡ ಬೈಬಲ್

ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್‌ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.

Cross references

ನಿರ್ಗಮಕಾಂಡ 16:23

ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್‌ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.

ನಿರ್ಗಮಕಾಂಡ 16:27

ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ.

ನಿರ್ಗಮಕಾಂಡ 20:8

ಸಬ್ಬತ್‌ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.

ನಿರ್ಗಮಕಾಂಡ 31:14

ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.

ನಿರ್ಗಮಕಾಂಡ 35:2

ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು.

Interlinear

Choose Theme