Home Bibles ☰ Books ಅಂಕೆಗಳ ಪುಸ್ತಕ 15:40 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 15:40 · ಕನ್ನಡ ಬೈಬಲ್

ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.

Cross references

ಲೇವ್ಯಕಾಂಡ 11:44

ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.

ಲೇವ್ಯಕಾಂಡ 19:2

ಇಸ್ರಾಯೇಲ್‌ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.

ಕೀರ್ತನೆಗಳು 103:18

ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.

ರೋಮಾಪುರದವರಿಗೆ 12:1

ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

ಎಫೆಸದವರಿಗೆ 1:4

ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.

ಕೊಲೊಸ್ಸೆಯವರಿಗೆ 1:2

ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

1 ತೆಸಲೋನಿಕದವರಿಗೆ 4:7

ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.

1 ಪೇತ್ರ 1:15

ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ.

Interlinear

Choose Theme