ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.
Cross references
ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು.
ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು.
ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.