Home Bibles ☰ Books ಅಂಕೆಗಳ ಪುಸ್ತಕ 16:27 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 16:27 · ಕನ್ನಡ ಬೈಬಲ್

ಆಗ ಅವರು ಕೋರಹ ದಾತಾನ್‌ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್‌ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.

Cross references

ನಿರ್ಗಮಕಾಂಡ 33:8

ಇದಾದ ಮೇಲೆ ಮೋಶೆಯು ಹೊರಗೆ ಗುಡಾರದ ಬಳಿಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವ ವರೆಗೆ ಅವನ ಹಿಂದೆ ನೋಡುತ್ತಿದ್ದರು.

2 ಅರಸುಗಳು 9:30

ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.

ಯೋಬ 9:4

ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಯೋಬ 40:10

ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.

ಸಾಮೇತಿಗಳು 16:18

ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.

ಸಾಮೇತಿಗಳು 18:12

ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.

ಯೆಶಾಯ 28:14

ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,

Interlinear

Choose Theme