Home Bibles ಅಂಕೆಗಳ ಪುಸ್ತಕ 16:28 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 16:28 · ಕನ್ನಡ ಬೈಬಲ್

ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.

Cross references

ನಿರ್ಗಮಕಾಂಡ 3:12

ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.

ನಿರ್ಗಮಕಾಂಡ 4:1

ಮೋಶೆಯು ಪ್ರತ್ಯುತ್ತರವಾಗಿ--ಆದರೆ ಇಗೋ, ಅವರು ನನ್ನನ್ನು ನಂಬುವದಿಲ್ಲ, ನನ್ನ ಮಾತನ್ನು ಕೇಳುವದೂ ಇಲ್ಲ. ಅವರು--ಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು.

ನಿರ್ಗಮಕಾಂಡ 7:9

ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು.

ಅಂಕೆಗಳ ಪುಸ್ತಕ 24:13

ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;

ದ್ವಿತೀಯೋಪದೇಶಕಾಂಡ 18:22

ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.

1 ಅರಸುಗಳು 18:36

ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ.

ಯೆಹೆಜ್ಕೇಲ 13:17

ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--

ಜೆಕರ್ಯ 2:9

ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.

ಜೆಕರ್ಯ 4:9

ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.

ಯೋಹಾನ 5:30

ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.

ಯೋಹಾನ 5:36

ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಯೋಹಾನ 6:38

ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.

ಯೋಹಾನ 11:42

ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.

ಯೋಹಾನ 14:11

ನಾನು ತಂದೆ ಯಲ್ಲಿದ್ದೇನೆಂತಲೂ ತಂದೆಯು ನನ್ನಲ್ಲಿದ್ದಾನೆಂತಲೂ ನನ್ನನ್ನು ನಂಬಿರಿ. ಇಲ್ಲದಿದ್ದರೆ ಆ ಕ್ರಿಯೆಗಳ ನಿಮಿತ್ತವಾದರೂ ನನ್ನನ್ನು ನಂಬಿರಿ.

Interlinear

Choose Theme