Home Bibles ಅಂಕೆಗಳ ಪುಸ್ತಕ 16:38 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 16:38 · ಕನ್ನಡ ಬೈಬಲ್

ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್‌ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.

Cross references

ಅಂಕೆಗಳ ಪುಸ್ತಕ 16:40

ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.

ಅಂಕೆಗಳ ಪುಸ್ತಕ 17:10

ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.

ಅಂಕೆಗಳ ಪುಸ್ತಕ 26:10

ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.

1 ಅರಸುಗಳು 2:23

ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.

ಸಾಮೇತಿಗಳು 1:18

ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.

ಸಾಮೇತಿಗಳು 8:36

ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.

ಸಾಮೇತಿಗಳು 20:2

ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ಯೆಹೆಜ್ಕೇಲ 14:8

ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.

ಹಬಕ್ಕೂಕ 2:10

ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.

1 ಕೊರಿಂಥದವರಿಗೆ 10:11

ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.

2 ಪೇತ್ರ 2:6

ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

Interlinear

Choose Theme