Home Bibles ಅಂಕೆಗಳ ಪುಸ್ತಕ 16:40 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 16:40 · ಕನ್ನಡ ಬೈಬಲ್

ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.

Cross references

ನಿರ್ಗಮಕಾಂಡ 30:7

ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು.

ಲೇವ್ಯಕಾಂಡ 22:10

ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.

ಅಂಕೆಗಳ ಪುಸ್ತಕ 1:51

ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

ಅಂಕೆಗಳ ಪುಸ್ತಕ 3:10

ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.

ಅಂಕೆಗಳ ಪುಸ್ತಕ 3:38

ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್‌ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.

ಅಂಕೆಗಳ ಪುಸ್ತಕ 18:4

ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.

1 ಅರಸುಗಳು 13:1

ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.

2 ದಿನವೃತ್ತಾಂತ 26:16

ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.

ಕೀರ್ತನೆಗಳು 115:10

ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ.

ಯೂದ 1:11

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

Interlinear

Choose Theme