ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
Cross references
ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.