ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.
Cross references
ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.
ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.