ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
Cross references
ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;