ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
Cross references
ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.