Home Bibles ಅಂಕೆಗಳ ಪುಸ್ತಕ 18:17 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 18:17 · ಕನ್ನಡ ಬೈಬಲ್

ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.

Cross references

ನಿರ್ಗಮಕಾಂಡ 29:16

ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.

ಲೇವ್ಯಕಾಂಡ 3:2

ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.

ಲೇವ್ಯಕಾಂಡ 3:5

ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.

ದ್ವಿತೀಯೋಪದೇಶಕಾಂಡ 15:19

ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.

Interlinear

Choose Theme