Home Bibles ಅಂಕೆಗಳ ಪುಸ್ತಕ 18:23 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 18:23 · ಕನ್ನಡ ಬೈಬಲ್

ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.

Cross references

ನಿರ್ಗಮಕಾಂಡ 27:21

ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್‌ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.

ಅಂಕೆಗಳ ಪುಸ್ತಕ 3:7

ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ.

ಅಂಕೆಗಳ ಪುಸ್ತಕ 18:1

ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.

ಅಂಕೆಗಳ ಪುಸ್ತಕ 18:20

ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.

ಅಂಕೆಗಳ ಪುಸ್ತಕ 19:21

ಇದು ಅವರಿಗೆ ನಿತ್ಯ ಕಟ್ಟಳೆಯಾಗಿರಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಚಿಮುಕಿಸುವವನು ತನ್ನ ವಸ್ತ್ರ ಗಳನ್ನು ಒಗೆಯಬೇಕು; ಪ್ರತ್ಯೇಕಿಸಲ್ಪಟ್ಟ ನೀರನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರ ಬೇಕು.ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.

ಅಂಕೆಗಳ ಪುಸ್ತಕ 26:62

ಇವರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರು ಇಪ್ಪತ್ತುಮೂರು ಸಾವಿರ ಮಂದಿಯಾಗಿದ್ದರು. ಇವ ರಿಗೆ ಇಸ್ರಾಯೇಲ್‌ ಮಕ್ಕಳಲ್ಲಿ ಸ್ವಾಸ್ತ್ಯವು ದೊರೆ ಯದ ಕಾರಣ ಅವರು ಇಸ್ರಾಯೇಲ್‌ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.

ಅಂಕೆಗಳ ಪುಸ್ತಕ 35:29

ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು.

ದ್ವಿತೀಯೋಪದೇಶಕಾಂಡ 10:9

ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು.

ಯೆಹೋಶುವ 13:14

ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯಾಕಂದರೆ ಅವನು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲಿನ ದೇವರಾದ ಕರ್ತನ ದಹನ ಬಲಿಗಳೇ ಅವರ ಬಾಧ್ಯತೆಯಾಗಿವೆ.

Interlinear

Choose Theme