ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
Cross references
ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.