Home Bibles ☰ Books ಅಂಕೆಗಳ ಪುಸ್ತಕ 19:22 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 19:22 · ಕನ್ನಡ ಬೈಬಲ್

ಇದಲ್ಲದೆ ಅಪವಿತ್ರನಾದವನು ಮುಟ್ಟು ವಂಥದ್ದೆಲ್ಲಾ ಅಪವಿತ್ರವಾಗುವದು; ಅವನನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಪವಿತ್ರನಾಗಿರಬೇಕು ಎಂದು ಹೇಳಿದನು.

Cross references

ಲೇವ್ಯಕಾಂಡ 5:2

ಇಲ್ಲವೆ ಯಾವನಾದರೂ ಅಶುದ್ಧವಾದ ಯಾವದನ್ನಾದರೂ ಮುಟ್ಟಿದರೆ, ಅಂದರೆ ಅದು ಅಶುದ್ಧ ವಾದ ಮೃಗದ ಹೆಣವಾಗಲಿ ದನದ ಹೆಣವಾಗಲಿ ಹರಿದಾಡುವವುಗಳ ಹೆಣಗಳಾಗಲಿ ಅವನಿಗೆ ತಿಳಿಯದಿ ದ್ದರೂ ಅವನು ಅಶುದ್ಧನಾಗಿದ್ದು ಅಪರಾಧಿಯಾಗಿರುವನು.

ಲೇವ್ಯಕಾಂಡ 7:19

ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.

ಲೇವ್ಯಕಾಂಡ 15:1

ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಲೇವ್ಯಕಾಂಡ 15:5

ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.

ಲೇವ್ಯಕಾಂಡ 15:6

ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.

ಲೇವ್ಯಕಾಂಡ 15:7

ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು.

ಲೇವ್ಯಕಾಂಡ 15:8

ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.

ಲೇವ್ಯಕಾಂಡ 15:10

ಇದಲ್ಲದೆ ಅವನ ಕೆಳಗಿರುವ ಯಾವದಾದರೂ ವಸ್ತುವನ್ನು ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವುಗಳಲ್ಲಿ ಯಾವದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.

ಲೇವ್ಯಕಾಂಡ 15:11

ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.

ಲೇವ್ಯಕಾಂಡ 15:21

ಅವಳ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆ ಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.

ಲೇವ್ಯಕಾಂಡ 15:22

ಅವಳು ಕೂತುಕೊಂಡಿರುವ ಯಾವದನ್ನಾದರೂ ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಅವನು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.

ಲೇವ್ಯಕಾಂಡ 15:23

ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕೂತುಕೊಂಡ ಯಾವದರ ಮೇಲಾಗಲಿ ಇರುವದನ್ನು ಮುಟ್ಟಿ ದವನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು.

ಲೇವ್ಯಕಾಂಡ 15:27

ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು, ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಅಂಕೆಗಳ ಪುಸ್ತಕ 19:7

ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಹಗ್ಗಾಯ 2:13

ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.

ಮತ್ತಾಯ 15:19

ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.

ಮಾರ್ಕ 7:21

ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು

Interlinear

Choose Theme