ಅಂಕೆಗಳ ಪುಸ್ತಕ 2:31 · ಕನ್ನಡ ಬೈಬಲ್
ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು.
Cross references
ಅಂಕೆಗಳ ಪುಸ್ತಕ 2:9
ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
ಅಂಕೆಗಳ ಪುಸ್ತಕ 2:16
ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು.
ಅಂಕೆಗಳ ಪುಸ್ತಕ 2:24
ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು.
ಅಂಕೆಗಳ ಪುಸ್ತಕ 10:25
ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.